ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ, ಸಿಐಡಿ ಡಿಐಜಿ ದಿಲೀಪ್ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಕೆಲ ದಿನಗಳ ಹಿಂದೆ ಸೋಂಕು(infection) ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ದಿಲೀಪ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಮಧ್ಯಾಹ್ನ ಹೃದಯ ಸ್ತಂಭನ (ಕಾರ್ಡಿಯಾಕ್ ಅರೆಸ್ಟ್)ದಿಂದಾಗಿ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ.