ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣವನ್ನು ತೀವ್ರವಾಗಿ ಖಂಡಿಸಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಒಂದು ತಿಂಗಳ ಹಿಂದೆಯೇ ಹೇಳಿದ್ದೆ. ಇಂದಿನ ಪರಿಸ್ಥಿತಿ ಆತಂಕ ಮೂಡಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಇಂದ್ರಜಿತ್ ಲಂಕೇಶ್, ಹಲ್ಲೆ ಪ್ರಕರಣ, ಗ್ಯಾಂಗ್ ರೇಪ್ ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕುವ ಬದಲು ಪ್ರಕರಣಗಳಲ್ಲಿ ರಾಜಕಾರಣಿಗಳ ಹಸ್ತಕ್ಷೇಪಗಳು ಹೆಚ್ಚುತ್ತಿವೆ. ಮೈಸೂರಿನಲ್ಲಿ ನಡೆಯುತ್ತಿರುವ ಇಂತಹ ಪ್ರಕರಣಗಳ ಬಗ್ಗೆ ಪ್ರತಿಯೊಬ್ಬರು ಪ್ರಶ್ನಿಸಬೇಕಿದೆ. ಪೊಲೀಸರ ಕರ್ತವ್ಯದಲ್ಲಿ ರಾಜಕಾರಣಿಗಳು ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಆಗಸ್ಟ್ ತಿಂಗಳ ಹುಣ್ಣಿಮೆ ಚಂದ್ರನಿಗೆ ʼಸ್ಟರ್‍ಜಿಯಾನ್ ಮೂನ್ʼ ಎಂದು ಕರೆಯುವುದರ ಹಿಂದಿದೆ ಈ ಕಾರಣ
ಮೈಸೂರನ್ನು ತಾಲಿಬಾನ್, ಯುಪಿಗಳಿಗೆ ಹೋಲಿಸುತ್ತಿದ್ದಾರೆ. ಇಂತಹ ಸ್ಥಿತಿ ಬಂದಿರುವುದು ಬೇಸರ ತಂದಿದೆ. ರಾಜ್ಯದಲ್ಲಿ 400ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ನಡೆದಿವೆ. ಪ್ರಕರಣ ತಡೆಯಲು, ಪ್ರಕರಣದ ತನಿಖೆಗೆ ಫಂಡ್ ಇದೆ ಆದರೆ ರಾಜ್ಯದಲ್ಲಿ ಈ ವರೆಗೆ ಆ ಫಂಡ್ ನ್ನು ಸರ್ಕಾರ ಬಳಕೆ ಮಾಡಿಲ್ಲ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗಳನ್ನು ವಿಧಿಸಬೇಕು ಎಂದು ಆಗ್ರಹಿಸಿದ್ದಾರೆ.