ನವದೆಹಲಿ: ಅಧಿಕಾರ ಹಂಚಿಕೆ ಸೂತ್ರಕ್ಕೆ ಸಮ್ಮತಿ ಸೂಚಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಂದೇ ಕಾರಿನಲ್ಲಿ ಎಐಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ತೆರಳಿದ್ದಾರೆ.
ಬೆಳಿಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ನಿವಾಸದಲ್ಲಿ ಉಪಹಾರ ಸಭೆಯಲ್ಲಿ ಪಾಲ್ಗೊಂಡಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್, ಸಭೆ ಬಳಿಕ ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಖರ್ಗೆ ಅವರ ನಿವಾಸಕ್ಕೆ ಒಂದೇ ಕಾರಿನಲ್ಲಿ ಪ್ರಯಾಣಿಸಿದ್ದಾರೆ.
ಕಗ್ಗಂಟಾಗಿದ್ದ ರಾಜ್ಯದ ನೂತನ ಸಿಎಂ ಆಯ್ಕೆ ವಿಚಾರವನ್ನು ಅಧಿಕಾರ ಹಂಚಿಕೆ ಸೂತ್ರದ ಮೂಲಕ ಪರಿಹರಿಸಲಾಗಿದ್ದು, ಸಿದ್ದರಾಮಯ್ಯ ಎರಡುವರೆ ವರ್ಷ ಮುಖ್ಯಮಂತ್ರಿ ಹಾಗೂ ಡಿ.ಕೆ. ಶಿವಕುಮಾರ್ ಎರಡುವರೆ ವರ್ಷ ಮುಖ್ಯಮಂತ್ರಿಯನ್ನಾಗಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.