ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 2,797 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,778 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 29,251 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.75ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,51,228 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 4,96,833 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,93,14,422 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,66,83 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.