alex Certify BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿಗೆ 7 ಜನ ಬಲಿ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಪ್ರಕರಣ ಎಷ್ಟು…..? ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ ಕೊರೊನಾ ಸೋಂಕಿಗೆ 7 ಜನ ಬಲಿ; 24 ಗಂಟೆಯಲ್ಲಿ ಪತ್ತೆಯಾದ ಹೊಸ ಪ್ರಕರಣ ಎಷ್ಟು…..? ಇಲ್ಲಿದೆ ಮಾಹಿತಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 656 ಜನರಲ್ಲಿ ಸೋಂಕು ಪತ್ತೆಯಾಗಿದೆ.

ಸಾವಿನ ಸಂಖ್ಯೆಯಲ್ಲಿಯೂ ಮತ್ತೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ ಕೋವಿಡ್ ಗೆ 7 ಜನರು ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ 5,30,553 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 7,034 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,30,380 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 1,03,328 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,84,61,828 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,94,240 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...