ನವದೆಹಲಿ: ದೇಶದಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 1,890 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದು ಕಳೆದ 149 ದಿನಗಳಲ್ಲಿ ಪತ್ತೆಯಾದ ಅತಿ ಹೆಚ್ಚು ಪ್ರಕರಣವಾಗಿದೆ.
ದೇಶದಲ್ಲಿ ಈವರೆಗೆ 5,30,831 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 9,433 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ದೇಶದಲ್ಲಿ ಈವರೆಗೆ 4,41,63,883 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 07,955 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,65,52,279 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,21,147 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.