alex Certify BIG NEWS: ಒಂದೇ ದಿನದಲ್ಲಿ ಮತ್ತೆ 140 ಜನರಲ್ಲಿ ಕೊರೊನಾ ಸೋಂಕು ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ ಮತ್ತೆ 140 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ರೂಪಾಂತರಿ ವೈರಸ್ ಭೀತಿ ನಡುವೆಯೇ ಕೋವಿಡ್ ಪ್ರಕರಣಗಳು ಕೊಂಚ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 140 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ದೇಶದಲ್ಲಿ ಈವರೆಗೆ 5,30,735 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 1,934 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,49,346 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 39,496 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,20,28,44,815 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 88,445 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...