ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚುತ್ತಿದ್ದು, ಕಳೆದ ಮೂರು ದಿನಗಳಿಂದ ಪ್ರತಿ ದಿನ 2000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ. 24 ಗಂಟೆಯಲ್ಲಿ 2,112 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,957 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 24,043 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,87,748 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 2,90,752 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,53,88,326 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,09,088 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.