alex Certify BIG NEWS: ಒಂದೇ ದಿನದಲ್ಲಿ 1,32,788 ಜನರಲ್ಲಿ ಕೊರೊನಾ ಸೋಂಕು; 3,207 ಜನ ಮಹಾಮಾರಿಗೆ ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 1,32,788 ಜನರಲ್ಲಿ ಕೊರೊನಾ ಸೋಂಕು; 3,207 ಜನ ಮಹಾಮಾರಿಗೆ ಬಲಿ

ನವದೆಹಲಿ: ಭಾರತದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 1,32,788 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,83,07,832ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3,207 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,35,102ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 17,93,645 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,61,79,085 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,31,456 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆಯೊಂದೇ ದಿನ 20,19,773 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದೆ. ದೇಶದಲ್ಲಿ ಈವರೆಗೆ 35,00,57,330 ಜನರಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ.

ದೇಶದಲ್ಲಿ ಈವರೆಗೆ 21,85,46,667 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...