ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,604 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,29,016 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 18,317 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.77ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,04,933 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 1,39,111 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,63,57,449 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,57,218 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.