ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,678 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,28,857 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 26,583 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.76ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,68,557 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 5,93,963 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,21,33,244 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 2,37,952 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.