alex Certify BIG NEWS: ಒಂದೇ ದಿನದಲ್ಲಿ 3,400ಕ್ಕೂ ಹೆಚ್ಚು ಜನ ಕೋವಿಡ್ ಗೆ ಬಲಿ; ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 3,400ಕ್ಕೂ ಹೆಚ್ಚು ಜನ ಕೋವಿಡ್ ಗೆ ಬಲಿ; ಹೊಸದಾಗಿ ಪತ್ತೆಯಾದ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ…?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಒಂದೇ ದಿನದಲ್ಲಿ ಲಕ್ಷಾಂತರ ಜನರಲ್ಲಿ ಪತ್ತೆಯಾಗುತ್ತಿದ್ದ ವೈರಸ್ ಇದೀಗ ಗಣನೀಯವಾಗಿ ಕಡಿಮೆ ಸಂಖ್ಯೆಯಲ್ಲಿ ಪತ್ತೆಯಾಗುತ್ತಿರುವುದು ಕೊಂಚ ನೆಮ್ಮದಿಯ ವಿಚಾರ. ಆದರೆ ಸಾವಿನ ಸಂಖ್ಯೆ ಇಳಿಕೆಯಾಗದಿರುವುದು ಆತಂಕಕಾರಿಯಾಗಿದೆ.

ಕಳೆದ 24 ಗಂಟೆಯಲ್ಲಿ 91,702 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,92,74,823ಕ್ಕೆ ಏರಿಕೆಯಾಗಿದೆ.

ಆದರೆ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 3,403 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,63,079ಕ್ಕೆ ಏರಿಕೆಯಾಗಿದೆ.

ಇನ್ನು ದೇಶದಲ್ಲಿ 11,21,671 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,77,90,073 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 1,34,580 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ 24,60,85,649 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...