alex Certify BIG NEWS: ಒಂದೇ ದಿನದಲ್ಲಿ 3,60,960 ಜನರಲ್ಲಿ ಕೊರೊನಾ ಸೋಂಕು ದೃಢ; 3,293 ಜನ ಸಾವು; ಕೋವಿಡ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ದಿನದಲ್ಲಿ 3,60,960 ಜನರಲ್ಲಿ ಕೊರೊನಾ ಸೋಂಕು ದೃಢ; 3,293 ಜನ ಸಾವು; ಕೋವಿಡ್ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ

ನವದೆಹಲಿ: ಭಾರತದಲ್ಲಿ ಕೊರೊನಾ ಮಹಾಸ್ಫೋಟ ಸಂಭವಿಸುತ್ತಿದ್ದು, ದಿನದಿಂದ ದಿನಕ್ಕೆ ದಾಖಲೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ 24 ಗಂಟೆಯಲ್ಲಿ 3,60,960 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,79,97,267ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 3293 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,01,187 ಕ್ಕೆ ಏರಿಕೆಯಾಗಿದೆ.

ಜೀವಾಪಾಯ ಲೆಕ್ಕಿಸದೆ ಜನರ ಪ್ರಾಣ ರಕ್ಷಿಸಿದ ಯುವಕ

ಇನ್ನು ದೇಶದಲ್ಲಿ 29,78,709 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,48,17,371 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 2,61,162 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ನಿನ್ನೆ 17,23,912 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 28,27,03,789 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ದೇಶದಲ್ಲಿ ಈವರೆಗೆ 14,78,27,367 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...