ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಳಿತವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,326 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.
ದೇಶದಲ್ಲಿ ಈವರೆಗೆ 5,29,024 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 17,912 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.78 ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,06,656 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ನಿನ್ನೆ 25,433 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,19,63,82,882 ಡೋಸ್ ಲಸಿಕೆ ಹಾಕಲಾಗಿದೆ.