BIG NEWS: ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದ ಕಾಂಗ್ರೆಸ್; ಒಂದೇ ಬಸ್ ನಲ್ಲಿ ಕಂಠೀರವ ಕ್ರೀಡಾಂಗಣಕ್ಕೆ ನಾಯಕರ ಪ್ರಯಾಣ

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಭೇರಿಯನ್ನು ಸ್ಮರಣೀಯವಾಗಿ ಮಾಡಲು ಮುಂದಾಗಿರುವ ಕಾಂಗ್ರೆಸ್ ನಾಯಕರು, ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನು ಹಮ್ಮಿಕೊಂಡಿದ್ದಾರೆ. ಇದಕ್ಕೆ ಈಗಾಗಲೇ ರಾಜ್ಯದ ಮೂಲೆ ಮೂಲೆಗಳಿಂದ ಲಕ್ಷಾಂತರ ಮಂದಿ ಆಗಮಿಸಿದ್ದಾರೆ.

ಕಾಂಗ್ರೆಸ್ ನಾಯಕರುಗಳು ಒಗ್ಗಟ್ಟಾಗಿದ್ದಾರೆ ಎಂಬ ಸಂದೇಶವನ್ನು ರವಾನಿಸಲು ಈಗ ಸಿದ್ಧತೆ ನಡೆದಿದ್ದು, ಶಾಂಗ್ರಿಲಾ ಹೋಟೆಲ್ ನಿಂದ ಒಂದೇ ಬಸ್ನಲ್ಲಿ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ರಣದೀಪ್ ಸಿಂಗ್ ಸುರ್ಜೆವಾಲ, ಕೆ.ಸಿ. ವೇಣುಗೋಪಾಲ್ ಮೊದಲಾದವರು ತೆರಳಲಿದ್ದಾರೆ.

ಶಾಂಗ್ರಿಲಾ ಹೋಟೆಲ್ ಬಳಿ ಈಗಾಗಲೇ ಐಷಾರಾಮಿ ಬಸ್ ಸಿದ್ಧವಾಗಿ ನಿಂತಿದ್ದು, ಕಾರ್ಯಕ್ರಮ ಆರಂಭಕ್ಕೂ ಮುನ್ನ ಹೋಟೆಲ್ ನಲ್ಲಿಯೇ ಔಪಚಾರಿಕ ಚರ್ಚೆ ನಡೆಸಲಿರುವ ಕಾಂಗ್ರೆಸ್ ನಾಯಕರು ಈಗ ಶರ್ಮಾ ಟ್ರಾವೆಲ್ಸ್ ಗೆ ಸೇರಿದ ಬಸ್ ನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿರುವ ಕಂಠೀರವ ಕ್ರೀಡಾಂಗಣಕ್ಕೆ ಹೋಗಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read