alex Certify BIG NEWS: ಒಡೆದು ಆಳುವ ನೀತಿ ಅನುಸರಿಸಿ ವೋಟ್ ಬ್ಯಾಂಕ್ ರಾಜಕಾರಣಕ್ಕಿಳಿದ ಸಿದ್ದರಾಮಯ್ಯ; ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು ಎನ್ನುತ್ತಾ ಕುಟುಂಬದವರನ್ನೇ ಅಭ್ಯರ್ಥಿಯನ್ನಾಗಿಸುವ ಜೆಡಿಎಸ್; ವಿಪಕ್ಷಗಳ ವಿರುದ್ಧ ಬಿಜೆಪಿ ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಡೆದು ಆಳುವ ನೀತಿ ಅನುಸರಿಸಿ ವೋಟ್ ಬ್ಯಾಂಕ್ ರಾಜಕಾರಣಕ್ಕಿಳಿದ ಸಿದ್ದರಾಮಯ್ಯ; ಕಾರ್ಯಕರ್ತರೇ ಪಕ್ಷದ ಬೆನ್ನೆಲುಬು ಎನ್ನುತ್ತಾ ಕುಟುಂಬದವರನ್ನೇ ಅಭ್ಯರ್ಥಿಯನ್ನಾಗಿಸುವ ಜೆಡಿಎಸ್; ವಿಪಕ್ಷಗಳ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಹಳೇ ಮೈಸೂರು ಭಾಗದ ಅಭಿವೃದ್ಧಿಗಾಗಿ ಏನೂ ಮಾಡಲಿಲ್ಲ. ಸ್ವತಃ ಮುಖ್ಯಮಂತ್ರಿಯಾಗಿದ್ದ ಈ ಭಾಗದವರಾದ ಸಿದ್ದರಾಮಯ್ಯನವರು ಕೂಡ ಅಭಿವೃದ್ಧಿ ಕಡೆಗಣಿಸಿ ಒಡೆದಾಳುವ ನೀತಿ ಅನುಸರಿಸಿ ಕೇವಲ ಓಟ್ ಬ್ಯಾಂಕ್ ರಾಜಕಾರಣಕ್ಕಿಳಿದುಬಿಟ್ಟರು. ಆದರೆ ಜನ ಇದಾವುದನ್ನೂ ಮರೆಯದೇ ಕಳೆದ ಚುನಾವಣೆಯಲ್ಲಿ ಪಾಠ ಕಲಿಸಿದರು ಎಂದು ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

2018ರ ಚುನಾವಣೆಯಲ್ಲಿ ಸೋಲು ಖಚಿತ ಎಂದು ಅರಿವಾದಾಗ ಸಿದ್ದರಾಮಯ್ಯನವರು ತಮ್ಮನ್ನು ನಂಬಿದವರನ್ನು ಅನಾಥರನ್ನಾಗಿಸಿ ಬಾದಾಮಿಗೆ ಓಡಿಹೋದರು. ಅಲ್ಲಿಂದ ಮತ್ತೆ ಇಲ್ಲಿಗೆ ಬರುವ ಯೋಚನೆ ಮಾಡುತ್ತಿದ್ದಾರೆ. ಆದರೆ ಒಡೆಯರ್‌ ಅವರಿಗೆ ಅಗೌರವದ ಏಕವಚನದ ಪದ ಬಳಸಿದವರನ್ನು ಈ ಭಾಗದ ಸುಸಂಸ್ಕೃತ ಜನರು ಶಾಶ್ವತವಾಗಿ ತಿರಸ್ಕರಿಸಿದ್ದಾರೆ.

ಈಗ ಮತ್ತೆ ಸಿದ್ದರಾಮಯ್ಯನವರು ಓಡಲೆಂದು ನಮ್ಮ ಸರ್ಕಾರ ರಾಜ್ಯದಲ್ಲಿ ಉತ್ತಮ ರಸ್ತೆಗಳನ್ನು ನಿರ್ಮಿಸುತ್ತಿದೆ. ಆದರೆ ಈಗ ಬನ್ನೂರು-ಮಳವಳ್ಳಿ ಮಾರ್ಗದಲ್ಲಿ ಓಡಲು ಕನಕಪುರದಲ್ಲಿ ಬಂಡೆ ಅಡ್ಡಲಾಗಿದೆ! ಸಿಎಂ ಆಗಿದ್ದಾಗ ನಿದ್ದೆ ಮಾಡಿ, ಈಗ ಚುನಾವಣೆಯೆಂದು ತಟ್ಟನೆ ಎಚ್ಚರಗೊಂಡು ಈ ಭಾಗದ ಬಗ್ಗೆ ಮಾತಾಡುತ್ತಿದ್ದಾರೆ ಎಂದು ಕಿಡಿಕಾರಿದೆ.

ಜೆಡಿಎಸ್ ವಿರುದ್ಧವೂ ಕೆಂಡ ಕಾರಿರುವ ಬಿಜೆಪಿ, ಹೆಸರಲ್ಲಷ್ಟೇ ಜಾತ್ಯಾತೀತತೆ ಆಗಿರುವ ಪಕ್ಷ ಮಾಡಿದ್ದೆಲ್ಲವೂ ಜಾತಿ ರಾಜಕಾರಣವೇ. ಕೇವಲ ಒಂದು ಸಮುದಾಯದವರನ್ನು ನೆಚ್ಚಿ ಬದುಕುತ್ತಿರುವ ಪಕ್ಷ ಆ ಸಮುದಾಯದ ಉದ್ದಾರವನ್ನೂ ಕಡೆಗಣಿಸಿ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಿಳಿದುಬಿಟ್ಟಿದೆ. ಕಾರ್ಯಕರ್ತರೇ ರಾಜಕೀಯ ಪಕ್ಷಗಳ ಬೆನ್ನೆಲುಬು. ಆದರೆ, ಜೆಡಿಎಸ್ ಕಾರ್ಯಕರ್ತರನ್ನೇ ಕಡೆಗಣಿಸಿ ಕೇವಲ ತಮ್ಮ ಕುಟುಂಬದವರನ್ನೇ ಚುನಾವಣಾ ಅಭ್ಯರ್ಥಿಯನ್ನಾಗಿಸುತ್ತದೆ. ಇದಕ್ಕೆ ಸ್ವಂತ ಕಾರ್ಯಕರ್ತರನ್ನೇ ನಂಬದ ಹೆಚ್.ಡಿ.ರೇವಣ್ಣನವರ ಸಮಜಾಯಿಷಿ, ‘ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟು ಗೆಲ್ಲಿಸಿದರೆ ಟೋಪಿ ಹಾಕಿ ಹೋಗ್ತಾರೆ’ ಅನ್ನೋದು ಎಂದು ಟೀಕಿಸಿದೆ.

ಹಳೆ ಮೈಸೂರು ಭಾಗದ ಜನರಿಗೆ ಬೇಕಿರೋದು ಅಭಿವೃದ್ಧಿಯ ರಾಜಕಾರಣ. ಈ ಭಾಗದ ಜನರು ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಆಷಾಢಭೂತಿತನವನ್ನು ಕಂಡು ಬದಲಾವಣೆಗೆ ತೆರೆದುಕೊಂಡಿದ್ದಾರೆ. ಇದೆಲ್ಲದಕ್ಕೂ ಮಂಡ್ಯದಲ್ಲಿ ನಡೆಯುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಕಾರ್ಯಕ್ರಮವೇ ಮುನ್ನುಡಿಯಾಗಲಿದೆ ಎಂದು ಹೇಳಿದೆ.

https://twitter.com/BJP4Karnataka/status/1607960456337195008

https://twitter.com/BJP4Karnataka/status/1607962624322605056

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...