ಹಾವೇರಿ: ಒಳಮೀಸಲಾತಿ ಘೋಷಣೆ ವಿರೋಧಿಸಿ ಬಂಜಾರಾ ಸಮುದಾಯದ ಸ್ವಾಮೀಜಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ನಡೆದಿದೆ.
ಶಿಗ್ಗಾವಿ ತಾಲೂಕು ಕಚೇರಿ ಬಳಿ ಗುಂಡೂರು ಗ್ರಾಮದ ತಿಪ್ಪೇಸ್ವಾಮಿ ಸ್ವಾಮೀಜಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಕ್ಷಣ ಅವರನ್ನು ರಕ್ಷಿಸಲಾಗಿದ್ದು, ಶಿಗ್ಗಾವಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಧ್ಯ ಸ್ವಾಮಿಜಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.