alex Certify BIG NEWS: ಒಳ್ಳೆ ಮಾತನಾಡಿದ ಮಾತ್ರಕ್ಕೆ ‘ಬೆಂಬಲ’ ಎಂದರ್ಥವಲ್ಲ; ಟ್ವೀಟ್ ಮೂಲಕ ಟಾಂಗ್ ನೀಡಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಳ್ಳೆ ಮಾತನಾಡಿದ ಮಾತ್ರಕ್ಕೆ ‘ಬೆಂಬಲ’ ಎಂದರ್ಥವಲ್ಲ; ಟ್ವೀಟ್ ಮೂಲಕ ಟಾಂಗ್ ನೀಡಿದ HDK

ಬೆಂಗಳೂರು: ಪರಿಷತ್ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿ ಬೆಂಬಲಿಸಲಿ ಎಂಬ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಒಳ್ಳೆ ಮಾತನಾಡಿದ ಮಾತ್ರಕ್ಕೆ ಬೆಂಬಲಿಸುವುದು ಎಂದರ್ಥವಲ್ಲ ಎಂದು ಹೇಳುವ ಮೂಲಕ ಬಿಜೆಪಿಗೆ ಜೆಡಿಎಸ್ ಬೆಂಬಲ ನಿರಾಕರಿಸಿದ್ದಾರೆ.

ಜೆಡಿಎಸ್ ಎಲ್ಲೆಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲೆಲ್ಲಾ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪ ಅವರು ಮನವಿ ಮಾಡಿರುವುದು ಸರಿಯಷ್ಟೇ. ಈ ಬಗ್ಗೆ ನಾನು ನಿನ್ನೆ ಚಿಕ್ಕಬಳ್ಳಾಪುರದಲ್ಲಿ ಹೇಳಿಕೆ ನೀಡಿ ಪಕ್ಷದ ಅಭಿಪ್ರಾಯ ಹೇಳಿದ್ದೇನೆ. ಆದರೆ ಆ ನನ್ನ ಹೇಳಿಕೆಯನ್ನು ತಪ್ಪಾಗಿ ಆಗ್ರಹಿಸಲಾಗಿದೆ. ಬಿಜೆಪಿಗೆ ಬೆಂಬಲ ನೀಡಲಾಗುವುದು ಎಂದು ನಾನು ಎಲ್ಲೂ ಹೇಳಿಲ್ಲ. ಆದರೆ ಬೆಂಬಲ ಕೇಳಿದ ಯಡಿಯೂರಪ್ಪ ಅವರ ಬಗ್ಗೆ ರಾಜಕೀಯವನ್ನು ಹೊರತುಪಡಿಸಿ ಒಂದೆರಡು ಒಳ್ಳೆಯ ಮಾತುಗಳನ್ನು ಹೇಳಿದ್ದೇನೆ. ಅವರ ರಾಜಕೀಯ ಅನುಭವ, ಹಿರಿತನಕ್ಕೆ ಗೌರವ ಕೊಟ್ಟು ಮಾತನಾಡಿದ್ದೇನೆ ಇದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಯಡಿಯೂರಪ್ಪ ಅವರ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿದಾಕ್ಷಣ ಜೆಡಿಎಸ್ ಪಕ್ಷವೂ ಬಿಜೆಪಿಗೆ ಬೆಂಬಲ ನೀಡುತ್ತದೆ ಎಂದರ್ಥವಲ್ಲ. ನಾನು ಕೊಟ್ಟ ಹೇಳಿಕೆಯನ್ನು ಮತ್ತೊಮ್ಮೆ ಗಮನಿಸಬೇಕು ಎಂಬುದು ನನ್ನ ಮನವಿ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿದೆ. ಆ ಕಾರಣಕ್ಕೆ ಅವರು ಜನರನ್ನು, ಮತದಾರರನ್ನು ದಿಕ್ಕು ತಪ್ಪಿಸುವ ಹಾಗೂ ಜೆಡಿಎಸ್ ವಿರುದ್ಧ ಸುಳ್ಳುಗಳನ್ನು ಹಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅವರಿಗೆ ಪ್ರತಿ ಚುನಾವಣೆ ಬಂದಾಗ ಜೆಡಿಎಸ್ ಜ್ವರ ಶುರುವಾಗುತ್ತೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ನ ಮಂಡ್ಯ, ಕೊಡಗು ಅಭ್ಯರ್ಥಿಗಳ ಬಗ್ಗೆ ಜನರಿಗೆ ಗೊತ್ತಾಗಿದೆ. ಮಂಡ್ಯದ ಕಾಂಗ್ರೆಸ್ ಅಭ್ಯರ್ಥಿಗೆ ಟಿಕೆಟ್ ಯಾರು ಕೊಡಿಸಿದರು ಎನ್ನುವುದನ್ನು ಸ್ವತ: ಸಹಕಾರ ಸಚಿವರೇ ಹೇಳಿದ್ದಾರೆ. ಹಾಗಾದರೆ ಕಾಂಗ್ರೆಸ್ ಪಕ್ಷ ಬಿಜೆಪಿಯ ಯಾವ ಟೀಮು? ಸಿ ಟೀಮಾ? ಡಿ ಟೀಮಾ? ನಮ್ಮನ್ನು ಬಿಜೆಪಿ ಬಿ ಟೀಮ್ ಎನ್ನುವವರೇ ಉತ್ತರಿಸಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...