ಬೆಂಗಳೂರು: ಕಾಸಿಲ್ಲದೇ ಬಿಜೆಪಿ ಸರ್ಕಾರದಲ್ಲಿ ಏನೂ ನಡೆಯಲ್ಲ. ಪ್ರತಿಯೊಂದು ಇಲಾಖೆ, ನೇಮಕಾತಿಗಳಲ್ಲೂ ಭ್ರಷ್ಟಾಚಾರ ನಡೆದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಪಿಎಸ್ ಐ ನೇಮಕಾತಿ ಅಕ್ರಮ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಸರ್ಕಾರದ ಪ್ರಮುಖರೇ ಹಗರಣದಲ್ಲಿ ಭಾಗಿಯಾಗಿದ್ದಾರೆ. ಪಿಎಸ್ ಐ ಮಾತ್ರವಲ್ಲ ಕೆಪಿಎಸ್ ಸಿ, ಪಿ ಡಬ್ಲ್ಯುಡಿ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಎಲ್ಲದರಲ್ಲೂ ಡೀಲ್ ನಡೆದಿದೆ. ಓರ್ವ ಮಹಿಳೆಗಾಗಿ ನಿಯಮಗಳನ್ನೇ ಬದಲಿಸಿ ಆದೇಶ ಹೊರಡಿಸಿದ್ದಾರೆ.
ಮಲ್ಲೇಶ್ವರಂನ ಮಹಿಳೆಗೆ ಸಹಾಯ ಮಾಡಲು ನಿಯಮಗಳನ್ನು ಬದಲಿಸಲಾಗಿದೆ. ಪಿಎಸ್ ಐ ನೇಮಕಾತಿಯಲ್ಲಿ ಎರಡೆರಡು ಆದೇಶ ಹೊರಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೇನೆ ಎಂದು ಹೇಳಿದರು.