
ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗೆ ಯಾವುದೇ ವಿರೋಧವಿಲ್ಲವೆಂದು ಕೇಂದ್ರ ಸರ್ಕಾರ ತಿಳಿಸಿದ್ದು, ಉಪ ಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ಈ ಪತ್ರವನ್ನು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹಂಚಿಕೊಳ್ಳುವ ಮೂಲಕ ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.
ಬಹಳ ಕಾಲದ ಹಿಂದೆಯೇ ಶಿವಸೇನೆ ಸರ್ವೋಚ್ಚ ನಾಯಕರಾಗಿದ್ದ ಬಾಳಠಾಕ್ರೆ ಸಾಹೇಬ್ ಈ ಎರಡು ನಗರಗಳ ಹೆಸರು ಬದಲಾವಣೆಗೆ ಒತ್ತಾಯಿಸಿದ್ದರು. ಬಳಿಕ ಅಧಿಕಾರಕ್ಕೆ ಬಂದ ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿ ಸರ್ಕಾರ ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿತ್ತಾದರೂ ಮಿತ್ರ ಪಕ್ಷಗಳಾದ ಕಾಂಗ್ರೆಸ್ ಹಾಗೂ ಎನ್‌ಸಿಪಿ ಅಸಮ್ಮತಿ ವ್ಯಕ್ತಪಡಿಸಿದ್ದವು.
ಇದೀಗ ಉದ್ಧವ್ ಠಾಕ್ರೆ ನಂತರ ಬಿಜೆಪಿ ಬೆಂಬಲದೊಂದಿಗೆ ಅಧಿಕಾರಕ್ಕೆ ಬಂದಿರುವ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಯ ಮತ್ತೊಂದು ಬಣ ಬಾಳಠಾಕ್ರೆಯವರ ಕನಸನ್ನು ಸಾಕಾರಗೊಳಿಸಿದೆ.