ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೂತಾಯಿ ಮಡಿಲು ಸೇರಿದ್ದು, ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ
ಈ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಮಾಹಿತಿ ನೀಡಿದ್ದು, ಇಂದು ಬೆಳಿಗ್ಗೆ ಪುನೀತ್ ಅಂತ್ಯಕ್ರಿಯೆ ಕಂಠೀರವ ಸ್ಟುಡಿಯೋದಲ್ಲಿ ಡಾ.ರಾಜ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿ ಪಕ್ಕದಲ್ಲಿ ನೆರವೇರಿಸಲಾಗಿದೆ. ಕುಟುಂಬದವರಿಂದ ಇಂದು ಹಾಲು-ತುಪ್ಪ ಶಾಸ್ತ್ರ ಇಲ್ಲ, ಇಂದು ಪೂಜೆ ಮಾತ್ರ ನೆರವೇರಿಸಲಾಗುತ್ತಿದೆ. ಕುಟುಂಬದಿಂದ ಹಾಲು-ತುಪ್ಪ ಕಾರ್ಯ ಮುಗಿಯುವವರೆಗೆ ಕಂಠೀರವ ಸ್ಟುಡಿಯೋ ಸುತ್ತ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಸಾರ್ವಜನಿಕರ ಪ್ರವ್ರ್ಶಕ್ಕೆ ಅವಕಾಶವಿರುವುದಿಲ್ಲ ಎಂದು ತಿಳಿಸಿದರು.
BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 24 ಗಂಟೆಯಲ್ಲಿ 14,667 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್
ಮಂಗಳವಾರ ಅಂದರೆ 5ನೇ ದಿನ ಹಾಲು ತುಪ್ಪ ಶಾಸ್ತ್ರ ನಡೆಯಲಿದೆ. ಕುಟುಂಬದವರಿಂದ ಹಾಲು-ತುಪ್ಪ ಶಾಸ್ತ್ರ ಮುಗಿದ ಬಳಿಕ ಕಂಠೀರವ ಸ್ಟುಡಿಯೋ ಒಳಗೆ ಸಾರ್ವಜನಿಕರಿಗೆ ಅವಕಾಶ ನೀಡಲಾಗುತ್ತದೆ. ಅಲ್ಲಿಯವರೆಗೂ ಸ್ಟುಡಿಯೋಗೆ ನಿರ್ಬಂಧ ವಿಧಿಸಲಾಗುವುದು ಎಂದು ತಿಳಿಸಿದರು.