alex Certify BIG NEWS: ಕಂಡ ಕಂಡಲ್ಲಿ ಪ್ರತಿಭಟನೆಗಿಳಿದ್ರೆ ಸೂಕ್ತ ಕ್ರಮ ಕೈಗೊಳ್ಳಿ; ಪೊಲೀಸರು, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಖಡಕ್‌ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂಡ ಕಂಡಲ್ಲಿ ಪ್ರತಿಭಟನೆಗಿಳಿದ್ರೆ ಸೂಕ್ತ ಕ್ರಮ ಕೈಗೊಳ್ಳಿ; ಪೊಲೀಸರು, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಖಡಕ್‌ ಆದೇಶ

ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆಗಿಳಿಯುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ. ಪ್ರತಿಭಟನೆಗಳು ಮತ್ತು ಪ್ರತಿಭಟನಾ ಮೆರವಣಿಗೆಗಳಿಗೆ ಸಂಬಂಧಪಟ್ಟಂತೆ  2021ರ ಪರವಾನಗಿ ಮತ್ತು ನಿಯಂತ್ರಣವನ್ನು ಜಾರಿಗೊಳಿಸುವಂತೆ ಆದೇಶಿಸಿದೆ.

ನಿಯಮ ಉಲ್ಲಂಘನೆ ಮಾಡುವ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ಸೂಚಿಸಿದೆ. ಸೆಕ್ಷನ್ 31 (4) ಕರ್ನಾಟಕ ಪೊಲೀಸ್ ಕಾಯಿದೆ 1963ರ ಅಡಿಯಲ್ಲಿ ರಚಿಸಲಾದ ಆದೇಶದ ಪ್ರಕಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಪ್ರತಿಭಟನೆ ನಡೆಸಬಹುದು. ಇತರ ಯಾವುದೇ ಭಾಗಗಳಲ್ಲಿ ಪ್ರತಿಭಟನೆ ಮಾಡಲು ಅವಕಾಶವಿಲ್ಲ. ಮಾರ್ಚ್‌ 2ರಂದು ನಗರದಲ್ಲಿ ನಡೆದ ಧರಣಿ ಬಳಿಕ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರು ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರದ ಆಧಾರದ ಮೇಲೆ ಸ್ವಯಂಪ್ರೇರಿತ ಮೊಕದ್ದಮೆಯನ್ನು ದಾಖಲಿಸಲಾಗಿತ್ತು.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಎಸ್ ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಪ್ರತಿಭಟನಾ ಮೆರವಣಿಗೆಗಳು ಮತ್ತು ಧರಣಿಗಳಿಗೆ ಫ್ರೀಡಂ ಪಾರ್ಕ್‌ನಲ್ಲಿ ಮಾತ್ರ ಅನುಮತಿ ನೀಡಬೇಕು. ಆದೇಶದ ನಿಬಂಧನೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಬಾಧ್ಯತೆ ಹೊಂದಿದೆ ಎಂದು ರಾಜ್ಯ ಸರ್ಕಾರ ಕೂಡ ನ್ಯಾಯಾಲಯದ ಮುಂದೆ ವಾಗ್ದಾನ ನೀಡಿದೆ.

ಅರ್ಜಿಯ ಸ್ವಯಂ ಮೋಟೋ ನೋಂದಣಿಯ ನಂತರ ನ್ಯಾಯಾಲಯವು ಹೊರಡಿಸಿದ ನಿರ್ದೇಶನಗಳ ಅನುಸಾರವಾಗಿ, ರಾಜ್ಯವು ಸೆಕ್ಷನ್ 31 (4) ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸುವ ಮೂಲಕ ಪ್ರತಿಭಟನೆಗಳು, ಪ್ರದರ್ಶನಗಳು ಮತ್ತು ಪ್ರತಿಭಟನಾ ಮೆರವಣಿಗೆಗಳನ್ನು 1963ರ ಕರ್ನಾಟಕ ಪೊಲೀಸ್‌ ಕಾಯಿದೆಯಂತೆ ನಿಯಂತ್ರಿಸಲು ಆದೇಶಿಸಲಾಗಿದೆ. ಆದೇಶದ ನಿಬಂಧನೆಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...