ಶಿವಮೊಗ್ಗ: ಕಳೆದ ರಾತ್ರಿ 12:30ಕ್ಕೆ ತಮಗೆ ಕಜಕಿಸ್ತಾನದಿಂದ ಬೆದರಿಕೆ ಕರೆ ಬಂದಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.
ಶಿವಮೊಗ್ಗದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್. ಈಶ್ವರಪ್ಪ, ಕಜಕಿಸ್ತಾನದ ಸಂಖ್ಯೆಯಿಂದ ತನಗೆ ಬೆದರಿಕೆ ಕರೆ ಬಂದಿದ್ದು, ಈ ಕುರಿತು ತನಿಖೆ ನಡೆಸುವಂತೆ ಪೊಲೀಸರಿಗೆ ದೂರು ನೀಡುವುದಾಗಿ ತಿಳಿಸಿದ್ದಾರೆ.
ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಬೆಳಗಾವಿಯಲ್ಲಿ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿದೆ. ಬೆಳಗಾವಿಯ ಟಿಳಕವಾಡಿಯಲ್ಲಿ ಐವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಜಾತಿ ಮೂಲಕ ಸಿಎಂ ಸ್ಥಾನ ಕೇಳ್ತಿದ್ದಾರೆ. ಈ ಮೂಲಕ ಇವರು ಜಾತಿವಾದಿಗಳು ಎಂಬುದು ಸಾಬೀತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.