ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಆಗಮಿಸಿದ್ದು, ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಆತ್ಮೀಯವಾಗಿ ಸ್ವಾಗಿತಿಸಿದರು.
ಕೇರಳದ ಕೊಚ್ಚಿನ್ ನಲ್ಲಿ ದೇಶಿ ನಿರ್ಮಿತ ವಿಮಾನ ವಾಹಕ ಯುದ್ಧನೌಕೆ ಐಎನ್ ಎಸ್ ವಿಕ್ರಾಂತ್ ಲೋಕಾರ್ಪಣೆ ಬಳಿಕ ಮಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಸಿಎಂ ಬಸವರಾಜ್ ಬೊಮ್ಮಾಯಿ ಪ್ರಧಾನಿ ಮೋದಿಯವರಿಗೆ ಕೇಸರಿ ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಂಡರು.
ಬಳಿಕ ಮಂಗಳೂರು ಏರ್ ಪೋರ್ಟ್ ನಿಂದ ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿ ಮೈದಾನದ ಸಮಾವೇಶಕ್ಕೆ ಆಗಮಿಸಿದ ಪ್ರಧಾನಿ ಅವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಪ್ರಧಾನಿ ಮೋದಿ ವೇದಿಕೆಯತ್ತ ಸಾಗುತ್ತಿದ್ದಂತೆ ಹರ್ಷೋದ್ಘಾರ, ಜಯಘೋಷ ಮುಗಿಲು ಮುಟ್ಟಿತ್ತು. ಮಂಗಳೂರಿನಲ್ಲಿ ಪ್ರಧಾನಿ ಮೋದಿ 3,800 ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಮಂಗಳೂರು ಸಂಪೂರ್ಣ ಕೇಸರಿ ಮಯವಾಗಿದ್ದು, 3000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.