alex Certify BIG NEWS: ಕನಕದಾಸರು, ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನಕದಾಸರು, ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪಾರ್ಚನೆ

ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಬಿಡುವಿಲ್ಲದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಶಾಸಕರ ಭವನಕ್ಕೆ ಆಗಮಿಸಿದ ಪ್ರಧಾನಿ ಮೋದಿ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಶಾಸಕರ ಭವನದ ಬಳಿ ಕನಕದಾಸರ ಪ್ರತಿಮೆಗೆ ಹಾಗೂ ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಶ್ರೀರಾಮುಲು ಉಪಸ್ಥಿತರಿದ್ದರು. ಬಳಿಕ ಅಲ್ಲಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣಕ್ಕೆ ತೆರಳಿದರು.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಂದೇ ಭಾರತ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನಿಡಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...