alex Certify BIG NEWS: ಕನಕದಾಸರ ಕೀರ್ತನೆ ಹಾಡಿದ ಪ್ರಧಾನಿ; ಬೆಂಗಳೂರು ಭಾರತದ ಆರ್ಥಿಕ ಭವಿಷ್ಯದ ಬುನಾದಿ; ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದ ಮೋದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನಕದಾಸರ ಕೀರ್ತನೆ ಹಾಡಿದ ಪ್ರಧಾನಿ; ಬೆಂಗಳೂರು ಭಾರತದ ಆರ್ಥಿಕ ಭವಿಷ್ಯದ ಬುನಾದಿ; ಸಿಲಿಕಾನ್ ಸಿಟಿ ಅಭಿವೃದ್ಧಿಗೆ ಸರ್ಕಾರ ಬದ್ಧ ಎಂದ ಮೋದಿ

ಬೆಂಗಳೂರು: ಭಾರತದ ಅಭಿವೃದ್ಧಿಯಲ್ಲಿ ಕರ್ನಾಟಕದ ಬೆಂಗಳೂರು ಮಹತ್ವದ್ದಾಗಿದೆ. ಕರ್ನಾಟಕಕ್ಕೆ ಮೊದಲ ವಂದೇ ಭಾರತ್ ರೈಲು ಸಿಕ್ಕಿದೆ. ಹೊಸ ಟರ್ಮಿನಲ್ ಲೋಕಾರ್ಪಣೆಯಾಗಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣಕ್ಕೆ ಕಾಯಕಲ್ಪ ಕಲ್ಪಿಸಲಾಗುವುದು. ಒಟ್ಟಾರೆ ಸಿಲಿಕಾನ್ ಸಿಟಿ ಬೆಂಗಳೂರನ್ನು ಕೆಂಪೇಗೌಡರ ಕಲ್ಪನೆಯಂತೆಯೇ ಅಭಿವೃದ್ಧಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

108 ಅಡಿ ಎತ್ತರದ ಕೆಂಪೇಗೌಡರ ಬೃಹತ್ ಕಂಚಿನ ಪ್ರತಿಮೆ ಅನಾವರಣದ ಬಳಿಕ ಮಾತನಾಡಿದ ಪ್ರಧಾನಿ ಮೋದಿ ಕರ್ನಾಟಕದ ಕೋಟಿ ಕೋಟಿ ಜನತೆಗೆ ಪ್ರಣಾಮಗಳು ಎಂದು ಕನ್ನಡದಲ್ಲಿಯೇ ಭಾಷಣ ಆರಂಭಿಸಿದರು. ಸ್ಟಾರ್ಟ್ ಅಪ್ ಎಂಬುದು ಒಂದು ಕಂಪನಿಯಿಂದ ಮಾತ್ರ ಆಗುವುದಿಲ್ಲ. ಸಮಗ್ರ ಪ್ರಯತ್ನದ ಫಲ. ಬೆಂಗಳೂರು ಭಾರತದ ಆರ್ಥಿಕ ಭವಿಷ್ಯಕ್ಕೆ ಅತ್ಯಂತ ಪ್ರಮುಖನಗರ. ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಕೇವಲ ರೈಲು ಮಾತ್ರವಲ್ಲ ನವ ಭಾರತದ ಹೊಸ ಮೈಲುಗಲ್ಲು ಎಂದರು.

ಸಣ್ಣ ರೈತರಿಗಾಗಿ ಹೊಸ ಯೋಜನೆ ಜಾರಿಗೆ ತಂದಿದ್ದೇವೆ. ಆಹಾರಧಾನ್ಯಗಳು ಸಕಾಲಕ್ಕೆ ಮಾರುಕಟ್ಟೆ ತಲುಪುವ ವ್ಯವಸ್ಥೆ ಆಗಿದೆ. ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಎಲ್ಲರೂ ಜೊತೆಯಾಗಿ ಹೆಜ್ಜೆ ಹಾಕಬೇಕು. ಇಂದು ಜಗತ್ತಿನಲ್ಲಿ ಕಿರುಧಾನ್ಯದ ಮಾತು ಕೇಳಿಬರುತ್ತಿದೆ. ರಾಮಧಾನ್ಯ ಚರಿತ್ರೆ ಮೂಲಕ ಕಿರುಧಾನ್ಯವಾದ ರಾಗಿಯ ಉದಾಹರಣೆ ನೀಡಿ ಸಮಾಜಕ್ಕೆ ಸಂದೇಶ ನೀಡಿದ ಮಾಹಾನುಭಾವರಿದ್ದಾರೆ. ಕನಕದಾಸರು ಒಂದು ಕಡೆ ಕೃಷ್ಣನ ಭಕ್ತಿಯ ಮಾರ್ಗ ತೋರಿದವರು. ಮತ್ತೊಂದೆದೆ ಕುಲ ಕುಲ ಕುಲವೆಂದು ಹೊಡೆದಾಡದಿರಿ ಎಂದು ಸಮಾಜಕ್ಕೆ ಸಮಾನತೆಯ ಸಂದೇಶವನ್ನು ಸಾರಿ ಹೇಳಿದವರು ಎಂದು ಕನಕದಾಸರನ್ನು ಸ್ಮರಿಸಿದರು.

ಬೆಂಗಳೂರನ್ನು ಆರ್ಥಿಕವಾಗಿ ಮಾತ್ರವಲ್ಲ ಸಾಂಸ್ಕೃತಿಕವಾಗಿಯೂ ಸಧೃಢಗೊಳಿಸಲಾಗುವುದು. ಬೆಂಗಳೂರು ಇಂದು ಜಾಗತಿಕ ನಗರವಾಗಿ ಬೆಳೆದು ನಿಂತಿದೆ. ಇಲ್ಲಿ ಪರಂಪರೆಯ ಸಂರಕ್ಷಣೆ ಜೊತೆಗೆ ಆಧುನಿಕ ಸೌಲಭ್ಯವನ್ನೂ ಒದಗಿಸಲಾಗುವುದು. ಕರ್ನಾಟಕದಲ್ಲಿ 4 ಲಕ್ಷ ಕೋಟಿ ಬಂಡವಾಳ ಹೂಡಿಕೆಯಾಗಿದ್ದು, ಡಬಲ್ ಎಂಜಿನ್ ಶಕ್ತಿಯಲ್ಲಿ ಮುನ್ನಡೆಯುತ್ತಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...