alex Certify BIG NEWS: ಕನ್ನಡಿಗರ ಕೋಪ ಸಿಡಿಯುವ ಮೊದಲು ಅಮೆಜಾನ್ ಕ್ಷಮೆ ಯಾಚಿಸಲಿ; ಕುಮಾರಸ್ವಾಮಿ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕನ್ನಡಿಗರ ಕೋಪ ಸಿಡಿಯುವ ಮೊದಲು ಅಮೆಜಾನ್ ಕ್ಷಮೆ ಯಾಚಿಸಲಿ; ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಕನ್ನಡ, ಕರ್ನಾಟಕದ ವಿಚಾರದಲ್ಲಿ ಇತ್ತೀಚೆಗೆ ಬಹುರಾಷ್ಟ್ರೀಯ ಕಂಪನಿಗಳು ಅತ್ಯಂತ ಅಜಾಗರೂಕವಾಗಿ, ಅಸೂಕ್ಷ್ಮವಾಗಿ ವರ್ತಿಸುತ್ತಿವೆ. ಗೂಗಲ್ ಬಳಿಕ ಇದೀಗ ಅಮೆಜಾನ್ ಕೆನಡಾ ವಿಭಾಗ ಇಂತಹ ನಿರ್ಲಕ್ಷ್ಯ ಮೆರೆದಿದೆ. ಈ ಸಂಸ್ಥೆಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಕನ್ನಡ ಬಾವುಟದಲ್ಲಿ ಒಳ ಉಡುಪು ತಯಾರಿಸಿ ಅಮೆಜಾನ್ ಆನ್ ಲೈನ್ ಶಾಪಿಂಗ್ ನಲ್ಲಿ ಮಾರಾಟ ಮಾಡಿದ ವಿಚಾರವಾಗಿ ಕಿಡಿಕಾರಿರುವ ಕುಮಾರಸ್ವಾಮಿ, ಕನ್ನಡ ಬಾವುಟದ ಜೊತೆಗೇ, ಕರ್ನಾಟಕದ ರಾಜಲಾಂಛನವನ್ನೂ ಅಮೆಜಾನ್‌ ಅಮಾನಿಸಿದೆ. ಇದು ಸರ್ಕಾರಕ್ಕೆ ಮಾಡಲಾದ ಅಪಮಾನ. ಸರ್ಕಾರ ಸಂವಿಧಾನದ ಅಂಗ. ಹೀಗಾಗಿ ಅಮೆಜಾನ್‌ ನಿಂದ ಬಹುದೊಡ್ಡ ಅಪಚಾರವಾಗಿದೆ. ಅಮೆಜಾನ್‌ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವೇ ಎಂಬುದರತ್ತ ರಾಜ್ಯ ಸರ್ಕಾರ ಗಮನ ಹರಿಸಬೇಕು. ಮುಂದೆ ಇಂಥ ಮುಜುಗರವಾಗದಂತೆ ನೋಡಿಕೊಳ್ಳಬೇಕು ಎಂದಿದ್ದಾರೆ.

ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ. ಜನಸಮುದಾಯವೊಂದರ ಭಾವನೆಗಳ ಜೊತೆಗೆ ಆಟವಾಡುತ್ತಿರುವವರನ್ನು ಪತ್ತೆ ಹಚ್ಚುವ ಸಂದರ್ಭ ಈಗ ಸೃಷ್ಟಿಯಾಗಿದೆ. ಇಂಥ ಅಪಮಾನಗಳ ಮೂಲಕ ಕನ್ನಡಿಗರ ಸಹನೆ ಕೆಣಕುವ ಕೆಲಸ ಇಂಥ ಸಂಸ್ಥೆಗಳಿಂದ ಆಗುತ್ತಲೇ ಇವೆ. ಕನ್ನಡಿಗರ ಕೋಪದಿಂದ ಸಿಡಿಯುವ ಕಿಡಿಯಿಂದ ಅನಾಹುತಗಳು ಸಂಭವಿಸಿದರೆ, ಅದನ್ನು ತಡೆದುಕೊಳ್ಳುವ ಶಕ್ತಿ ಈ ಸಂಸ್ಥೆಗಳಿಗೆ ಇರುವುದಿಲ್ಲ. ಪರಿಸ್ಥಿತಿ ಅಲ್ಲಿಗೆ ಹೋಗುವ ಮೊದಲು ಅಮೆಜಾನ್ ಜಾಗತಿಕವಾಗಿ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...