ಬೆಂಗಳೂರು: ಗ್ರಾಮೀಣ ಭಾಗದ ಸರ್ಕಾರಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪೂರೈಸಿದ 500 ಅತ್ಯುತ್ತಮ ವಿದ್ಯಾರ್ಥಿಗಳ ಹೆಚ್ಚಿನ ಶಿಕ್ಷಣಕ್ಕೆ ಒತ್ತು ನೀಡಲಾಗುವುದು. ಸಿಇಟಿ ಮೂಲಕ ಸರ್ಕಾರಿ ಕೋಟಾದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೆರವು ನೀಡಲಾಗುವುದು.
ಈ ವಿದ್ಯಾರ್ಥಿಗಳ ವೃತ್ತಿಪರ ಶಿಕ್ಷಣದ ಸಂಪೂರ್ಣ ಶುಲ್ಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.