
ಬೆಂಗಳೂರು:ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದರೆ, ಬೆಳಕಿನ ಹಬ್ಬ ದೀಪಾವಳಿಯಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗಿದೆ.
ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ, ಮಾಸ್ಕ್ ಕಡ್ಡಾಯವಾಗಿದ್ದು, ದೈಹಿಕ ಅಂತರವಿಲ್ಲದ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ.
ಇನ್ನು ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅನುಮತಿ ನೀಡಲಾಗಿದೆ. ನವೆಂಬರ್ 1ರಿಂದ 10ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗುವುದು ಎಂದು ಗೈಡ್ ಲೈನ್ ನಲ್ಲಿ ತಿಳಿಸಲಾಗಿದೆ.