alex Certify BIG NEWS: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ; ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಈಗಾಗಲೇ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ 5 ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಮುಂಜಾಗೃತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೂನ್ 30ರವರೆಗೆ ಕರಾವಳಿಯಲ್ಲಿ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡು ಜಿಲ್ಲೆ ಬೀದರ್, ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ರಾಯಚೂರು, ವಿಜಯಪುರ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...