ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟದಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳು ಹಾಗೂ ಸಚಿವರ ಸಭೆ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಜಿಲ್ಲಾ ಉಸ್ತುವಾರಿ ಸಚಿವರುಗಳಾದ ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್, ಮಕಾಳು ವೈದ್ಯ ಹಾಗೂ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹಾಗೂ ಮಳೆ ಹಾನಿ ಕುರಿತು ಚರ್ಚಿಸಿದರು. ಅಧಿಕಾರಿಗಳಿಂದ ಮಾಹಿತಿ ಪಡೆದರು.
ಈ ವೇಳೆ ಮುಖ್ಯ ಕಾರ್ಯದರ್ಶಿ ಅವರಿಗೆ ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳಿಗೆ ತುರ್ತಾಗಿ ಸಜ್ಜುಗೊಳಿಸಲು ಆದೇಶಿಸಿದರು. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರುಗಳು ಮಳೆಹಾನಿ ಪ್ರದೇಶಕ್ಕೆ ತೆರಳಿ ಪರಿಶೀಲನೆ ನಡೆಸಿ. ಪರಿಹಾರ ಕಾರ್ಯ ಕೈಗೊಳ್ಳುವಂತೆ ಸೂಚಿಸಿದರು.