ಬೆಂಗಳೂರು: ವಿಧಾನಸಭಾ ಚುನಾವಣೆ ಮತ ಎಣಿಕೆ ಬಿರುಸಿನಿಂದ ಸಾಗಿದ್ದು, ಸಧ್ಯದ ಟ್ರೆಂಡ್ ಪ್ರಕಾರ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.
224 ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಸ್ತುತ 115 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಬಿಜೆಪಿ 74 ಹಾಗೂ ಜೆಡಿಎಸ್ 29 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮ್ಯಾಜಿಕ್ ಸಂಖ್ಯೆ ದಾಟುತ್ತಿದ್ದಂತೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮ ಮನೆಮಾಡಿದೆ. ಕಾಂಗ್ರೆಸ್ ಕಚೇರಿ ಬಳಿ ಕಾರ್ಯಕರ್ತರು ಪಾಟಿಕಿ ಸಿಡಿಸಿ ಸಂಭ್ರಮಿಸಿದ್ದಾರೆ.