ಬೆಂಗಳೂರು: ಪೊಲೀಸ್ ಕಾಯ್ದೆ ತಿದ್ದುಪಡಿ ವಿಧೇಯಕದ ವಿಚಾರವಾಗಿ ಕರ್ನಾಟಕ ಪೊಲೀಸ್ ಇಲಾಖೆ ಮಹತ್ವದ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದೆ.
ಟೈಪಿಂಗ್ ದೋಷವಿರುವ ಕಾರಣ ಪೊಲೀಸ್ ಕಾಯ್ದೆ ತಿದ್ದುಪಡಿ ಕರಡು ಪ್ರತಿ ಅಂತಿಮವಾಗಿಲ್ಲ. ತಿದ್ದುಪಡಿ ಏನೆಂಬುದು ಅಂತಿಮವಾಗುವವರೆಗೆ ಎಲ್ಲರೂ ಕಾಯಲೇಬೇಕು ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಕೆಲವೆಡೆ ತಿದ್ದುಪಡಿ ಕಾಯ್ದೆ ಜಾರಿಯಾದರೆ ಸಿಬ್ಬಂದಿಗಳ ಮೇಲ್ಮನವಿಗೆ ಅವಕಾಶವಿರುವುದಿಲ್ಲ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಇಂತಹ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ಯಾವುದೇ ಶಿಕ್ಷೆ ಪ್ರಮಾಣ ಪ್ರಶ್ನಿಸಿ ಮೇಲ್ಮನವಿಗೆ ತಡೆ ಇರುವುದಿಲ್ಲ. ಪೊಲೀಸ್ ಸಿಬ್ಬಂದಿ ಮೇಲ್ಮನವಿ ಸಲ್ಲಿಸಲು ನಿರ್ಬಂಧಗಳು ಇರುವುದಿಲ್ಲ. ಮೇಲ್ಮನವಿ ಸಲ್ಲಿಸುವ ಅವಕಾಶ ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟನೆ ನೀಡಿದೆ.