ಬೆಂಗಳೂರು; ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಹಿನ್ನೆಲೆಯಲ್ಲಿ ತೆಲುಗು ನಟ ಜ್ಯೂ.ಎನ್ ಟಿ ಆರ್ ಬೆಂಗಳೂರಿಗೆ ಆಗಮಿಸಿದ್ದಾರೆ.
ಹೈದರಾಬಾದ್ ನಿಂದ ವಿಶೇಷ ವಿಮಾನದಲ್ಲಿ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಜ್ಯೂ.ಎನ್ ಟಿ ಆರ್ ಅವರನ್ನು ತೋಟಗಾರಿಕಾ ಸಚಿವ ಮುನಿರತ್ನ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು.
ಹೆಚ್ ಎ ಎಲ್ ನಿಂದ ತಾಜ್ ವೆಸ್ಟ್ ಎಂಡ್ ಹೋಟೆಲ್ ಗೆ ತೆರಳಿರುವ ನಟ ಜ್ಯೂ.ಎನ್ ಟಿ ಆರ್. ಬಳಿಕ ಸಂಜೆ ನಾಲ್ಕು ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿರುವ ತಮ್ಮ ಗೆಳೆಯ ದಿ.ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.