ಬೆಂಗಳೂರು: ಪವರ್ ಸ್ಟಾರ್ ದಿ.ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನವೆಂಬರ್ 1 ರಂದು ಪ್ರದಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ತೋಟಗಾರಿಕೆ ಇಲಾಖೆ ಮತ್ತು ಮೈಸೂರು ಉದ್ಯಾನ ಕಲಾ ಸಂಘದ ವತಿಯಿಂದ ಲಾಲ್ಬಾಗ್ ನಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ನವೆಂಬರ್ 1ರಂದು ದಿ.ನಟ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಪ್ರಶಸ್ತಿ ಕೊಡಮಾಡಲು ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿಯನ್ನು ರಚಿಸಲಾಗುವುದು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.