ಬೆಂಗಳೂರು: ರಣ ಮಳೆಯಿಂದಾಗಿ ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಗುಜರಾತ್ ರಾಜ್ಯಗಳು ತತ್ತರಿಸಿದ್ದು, ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 20ರವರೆಗೆ ಕರ್ನಾಟಕ, ಗೋವಾ, ಮಹಾರಾಷ್ಟ್ರ, ಛತ್ತೀಸ್ ಗಢ, ಆಂಧ್ರಪ್ರದೇಶ, ಗುಜರಾತ್, ಕೇರಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ತಿಳಿಸಿದೆ.
ಓಡಿಶಾ, ಹಿಮಾಚಲಪ್ರದೇಶ, ಉತ್ತರಾಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಭಾರಿ ಮಳೆ ನಡುವೆ ಪ್ರವಾಹ ಭೀತಿ ಎದುರಾಗಲಿದ್ದು, ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮತ್ತೆ ವರುಣಾರ್ಭಟ ಜೋರಾಗಿದ್ದು, ಹಲವೆಡೆ ಭೂಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚುತ್ತಿವೆ. ಉತ್ತರ ಕರ್ನಾಟಕ ಭಾಗದಲ್ಲಿ ನದಿಗಳು ಅಪಯಾದಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹ ಭೀತಿ ಉಂಟಾಗಿದೆ. ಒಟ್ಟಾರೆ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ.