ಕಲಬುರಗಿ: ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ಹೈಕೋರ್ಟ್ ನ್ಯಾ.ವೀರಪ್ಪ ದಿಢೀರ್ ಭೇಟಿ ನೀಡಿದ್ದು, ವೈದ್ಯಕೀಯ ಕಾಲೇಜಿನ ಅವ್ಯವಸ್ಥೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಮ್ಸ್ ಆಸ್ಪತ್ರೆಯಲ್ಲಿ ದನಗಳು ಕೂಡ ಇರಲು ಸಾಧ್ಯವಿಲ್ಲದ ಸ್ಥಿತಿಯಿದೆ. ಇಂತಹ ಸ್ಥಳದಲ್ಲಿ ರೋಗಿಗಳು ಹೇಗೆ ಇರುತ್ತಾರೆ ? ಎಂದು ಹೈಕೋರ್ಟ್ ನ್ಯಾಯಮೂರ್ತಿಗಳು ಆಸ್ಪತ್ರೆ ಅವ್ಯವಸ್ಥೆ ಕಂಡು ವೈದ್ಯರ ವಿರುದ್ಧ ಗರಂ ಆಗಿದ್ದಾರೆ.
ಆಸ್ಪತ್ರೆಯಲ್ಲಿನ ಶೌಚಾಲಯವನ್ನು ಕಂಡು ಕೆಂಡ ಕಾರಿದ ನ್ಯಾಯಮೂರ್ತಿಗಳು ರೋಗಿಗಳಿಗೆ ಚಿಕಿತ್ಸೆ ಕೊಡಬೇಕಾದ ಸರ್ಕಾರಿ ಆಸ್ಪತ್ರೆಯನ್ನು ಈ ರೀತಿ ಇಟ್ಟುಕೊಂಡರೆ ರೋಗಿಗಳು ಯಾಕೆ ಬರುತ್ತಾರೆ. ಸರ್ಕಾರಿ ಆಸ್ಪತ್ರೆಯಲ್ಲಿನ ಅವ್ಯವಸ್ಥೆಯಿಂದ ಬೇಸತ್ತು ಜನರು ಖಾಸಗಿ ಆಸ್ಪತ್ರೆಗಳಿಗೆ ಹೋಗುತ್ತಾರೆ. ಖಾಸಗಿ ಆಸ್ಪತ್ರೆಗಳು ಬೆಳೆಯಲು ಒಂದು ರೀತಿಯಲ್ಲಿ ನೀವೇ ಪರೋಕ್ಷ ಕಾರಣ ಎಂದು ವೈದ್ಯರು ಹಾಗೂ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.