ಬೆಂಗಳೂರು: ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಳಿಕ ಇದೀಗ ಬಿಜೆಪಿ ಕಲಬುರ್ಗಿ ಪಾಲಿಕೆ ಮೇಲೆ ಕಣ್ಣಿಟ್ಟಿದ್ದು, ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ತಂತ್ರಗಾರಿಕೆ ರೂಪಿಸಿದೆ.
ಜೆಡಿಎಸ್ ಜೊತೆ ಸೇರಿ ಕಲಬುರ್ಗಿ ಮೇಯರ್ ಸ್ಥಾನ ಗಿಟ್ಟಿಸಿಕೊಳ್ಳಲು ಮುಂದಾಗಿದ್ದ ಕಾಂಗ್ರೆಸ್ ಗೆ ತಿರುಮಂತ್ರ ಹಾಕಲು ಸಿದ್ಧತೆ ನಡೆಸಿರುವ ಬಿಜೆಪಿ ಇದೀಗ ಜೆಡಿಎಸ್ ಜೊತೆ ಮೈತ್ರಿಗೆ ಮುಂದಾಗಿದೆ. ಕಲಬುರ್ಗಿಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸುಳಿವು ನೀಡಿದ್ದಾರೆ.
ನೆನಪಿನ ಶಕ್ತಿ ಹೆಚ್ಚಾಗಿ, ದಿನಪೂರ್ತಿ ಫ್ರೆಶ್ ಆಗಿರಲು ಖಾಲಿ ಹೊಟ್ಟೆಯಲ್ಲಿ ಇದನ್ನ ತಿನ್ನಿ
ಕಲಬುರ್ಗಿ ಪಾಲಿಕೆ ವಿಚಾರದಲ್ಲಿ ನಾವು ಒಟ್ಟಾಗಿ ಹೋಗೋಣ ಎಂದು ನಾನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಹೇಳಿದ್ದೇನೆ. ಸ್ಥಳೀಯ ಮುಖಂಡರ ಜತೆ ಚರ್ಚಿಸಿ ತಿಳಿಸುವುದಾಗಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಒಂದಾಗಿ ಕೆಲಸ ಮಾಡಲು ಕುಮಾರಸ್ವಾಮಿ ಒಲವು ತೋರಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಯಾದರೆ ಪಾಲಿಕೆ ಚುನಾವಣಾ ಫಲಿತಾಂಶದಲ್ಲಿ ಬಹುಮತ ಸಿಗುತ್ತದೆ ಈ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ಹೇಳಿದ್ದಾರೆ. ಒಟ್ಟಾರೆ ಕಲಬುರ್ಗಿ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಹುತೇಕ ಫಿಕ್ಸ್ ಆಗಿದೆ.