alex Certify BIG NEWS: ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ACB ಬಲೆಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ACB ಬಲೆಗೆ

ಕಲಬುರ್ಗಿ: ಕೋವಿಡ್ ಸುರಕ್ಷತಾ ಬಿಲ್ ಗಾಗಿ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ರೆಡ್ ಹ್ಯಾಂಡ್ ಆಗಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕಲಬುರ್ಗಿ ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ವಣಿಕ್ಯಾಳ ಹಾಗೂ ಪಾಲಿಕೆ ಅಕೌಂಟೆಂಟ್ ಚನ್ನಪ್ಪ 15 ಸಾವಿರ ಲಂಚಕ್ಕೆ ಕೈಯೊಡ್ಡಿ ಎಸಿಬಿ ಕೈಯಲ್ಲಿ ಸಿಕ್ಕಿಬಿದ್ದಿದ್ದಾರೆ.

2021ರ ಕೋವಿಡ್ ಸುರಕ್ಷತಾ ಚಕ್ರದ ಹೆಲ್ಪ್ ಲೈನ್ ನಿರ್ದೇಶಕ ಶರಣಬಸಪ್ಪನ ಬಳಿ ಪಾಲಿಕೆ ಆಯುಕ್ತ ಶಂಕ್ರಣ್ಣ 7 ಲಕ್ಷದ 50 ಸಾವಿರ ಬಿಲ್ ಮಾಡಲು ಶೇ.2ರಷ್ಟು ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಶರಣಪ್ಪ ಎಸಿಬಿಗೆ ದೂರು ನೀಡಿದ್ದರು. ಇದೀಗ ಶರಣಪ್ಪರಿಂದ ಲಂಚ ಸ್ವೀಕರಿಸುತ್ತಿದ್ದಾಗ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಮಹಾನಗರ ಪಾಲಿಕೆ ಆಯುಕ್ತ ಶಂಕ್ರಣ್ಣ ಹಾಗೂ ಅಕೌಂಟೆಂಟ್ ಚನ್ನಪ್ಪರನ್ನ ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...