alex Certify BIG NEWS: ಕಲಬುರ್ಗಿ CPI ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; 8 ಆರೋಪಿಗಳ ಬಂಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲಬುರ್ಗಿ CPI ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; 8 ಆರೋಪಿಗಳ ಬಂಧನ

ಬೆಂಗಳೂರು: ಗಾಂಜಾ ಮಾರಾಟಗಾರರ ವಿರುದ್ಧ ಕಾರ್ಯಾಚಾರಣೆ ನಡೆಸಲು ತೆರಳಿದ್ದ ಕಲಬುರ್ಗಿ ಸರ್ಕಲ್ ಇನ್ಸ್ ಪೆಕ್ಟರ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಕಲಬುರ್ಗಿ ಗ್ರಾಮಾಂತರ ಠಾಣೆ ಇನ್ಸ್ ಪೆಕ್ಟರ್ ಶ್ರೀಮಂತ್ ಇಲ್ಲಾಳ್ ಮೇಲೆ ಹಲ್ಲೆ ನಡೆಸಿದ್ದ 8 ಆರೋಪಿಗಳನ್ನು ಬಂಧಿಸಲಾಗಿದೆ. ದುಷ್ಕರ್ಮಿಗಳು ಕಸಿದುಕೊಂಡಿದ್ದ ಶ್ರೀಮಂತ್ ಇಲ್ಲಾಳ್ ಅವರ ಸರ್ವಿಸ್ ರಿವಾಲ್ವರ್ ನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ದುಷ್ಕರ್ಮಿಗಳಿಂದ ಗಂಭೀರವಾಗಿ ಹಲ್ಲೆಗೊಳಗಾಗಿರುವ ಸಿಪಿಐ ಶ್ರೀಮಂತ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನೂ ಅವರಿಗೆ ಪ್ರಜ್ಞೆ ಬಂದಿಲ್ಲ . ಇನ್ನು ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...