BIG NEWS: ಕಲಾಪ ಆರಂಭವಾಗುತ್ತಿದ್ದಂತೆ ಶಾಸಕ ಶರಣಗೌಡ ಕಂದಕೂರ್ ಗೆ ಕ್ಲಾಸ್ ತೆಗೆದುಕೊಂಡ ಸ್ಪೀಕರ್ ಖಾದರ್

ಬೆಂಗಳೂರು: ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆ ಪ್ರತಿಭಟನೆಗೆ ಮುಂದಾದ ಶಾಸಕರ ವಿರುದ್ಧ ಸ್ಪೀಕರ್ ಯು.ಟಿ.  ಖಾದರ್ ಗರಂ ಆಗಿದ್ದಾರೆ.

ಗುರುಮಿಠಕಲ್ ಶಾಸಕ ಶರಣಗೌಡ ಕಂದಕೂರ್, ಭಿತ್ತಿ ಪತ್ರ ಹಿಡಿದು ಸದನಕ್ಕೆ ಆಗಮಿಸಿದ್ದರು. ಇದನ್ನು ನೋಡಿ ಗರಂ ಆದ ಸ್ಪೀಕರ್ ಖಾದರ್, ಮತ ಪಡೆಯುವ ಲೆಕ್ಕಾಚಾರ, ಬಿಟ್ಟಿ ಪ್ರಚಾರ ಪಡೆಯುವ ಲೆಕ್ಕಾಚಾರ ಹಾಕಿಕೊಂಡು ಈ ರೀತಿ ಭಿತ್ತಿ ಪತ್ರಗಳನ್ನು ಸದನದಲ್ಲಿ ತೋರಿಸುವ ಅವಶ್ಯಕತೆ ಇಲ್ಲ ಎಂದು ಗುಡುಗಿದರು.

ನಾನೂ ಕೂಡ ಶಾಸಕನಾಗಿ ಬಂದವನು. ಪ್ರಚಾರಕ್ಕಾಗಿ ಸದನದಲ್ಲಿ ಭಿತ್ತಿ ಪತ್ರ ಪ್ರದರ್ಶನ ಮಾಡುವ ಅಗತ್ಯವಿಲ್ಲ ಎಂದು ಹೇಳಿದರು. ಸ್ಪೀಕರ್ ಮಾತಿಗೆ ವಿಪಕ್ಷ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read