ಬೆಂಗಳೂರು: ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ನಿಗದಿಯಂತೆಯೇ ಎರಡು ವಾರಗಳ ಕಾಲ ನಡೆಯಲಿದೆ ಇದರಲ್ಲಿ ಯಾವುದೇ ಗೊಂದಲಗಳು ಇಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಸಚಿವರು, ಕಲಾಪವನ್ನು ಒಂದು ವಾರಕ್ಕೆ ಮೊಟಕುಗೊಳಿಸುವ ಪ್ರಶ್ನೆಯೇ ಇಲ್ಲ. ನಿಗದಿಯಂತೆ ಎರಡು ವಾರಗಳ ಕಾಲ ನಡೆಯಲಿದೆ. ಎಲ್ಲರಿಗೂ 2 ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸಾಕಷ್ಟು ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ ಎಂದರು.
BREAKING NEWS: ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ
ನೆರೆ ಹಾನಿ ಪರಿಹಾರವಾಗಿ ಅಧಿವೇಶನದಲ್ಲಿ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಸಚಿವರು, ಕಾಂಗ್ರೆಸ್ ವಿಪಕ್ಷದಲ್ಲಿದೆ. ಹಾಗಾಗಿ ಪ್ರತಿಭಟನೆ ಮಾಡ್ತಾರೆ. ಕರ್ನಾಟಕದ ಇತಿಹಾಸದಲ್ಲಿಯೇ 600 ಕೋಟಿ ರೂಪಾಯಿ ಬೆಳೆ ಪರಿಹಾರ ಘೋಷಣೆ ಮಾಡಿದ್ದೇವೆ. 20 ದಿನಗಳಲ್ಲಿ 500 ಕೋಟಿ ರೂಪಾಯಿ ನೀಡಿದ್ದೇವೆ. ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಹಾಕಿದ್ದೇವೆ ಎಂದು ಹೇಳಿದರು.