ರಾಯಚೂರು: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ರಾಯಚೂರು ಜಿಲ್ಲೆಯ ಯರಗೆರಾ ಕಾಲೋನಿ ನಿವಾಸಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಈ ಮೂಲಕ ಕಲುಷಿತ ನೀರಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಕಲುಷಿತ ಕುಡಿಯುವ ನೀರು ಸೇವಿಸಿ ಅನಾರೋಗ್ಯಕ್ಕೀಡಾಗಿದ್ದ 48 ವರ್ಷದ ಜನಕರಾಜ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ವಾಂತಿ, ಭೇದಿಯಿಂದ ಬಳಲುತ್ತಿದ್ದ ಜನಕರಾಜ್ ಅವರನ್ನು ಒಂದು ವಾರದ ಹಿಂದೆ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.
ರಾಯಚೂರಿನ ಇಂದಿರಾನಗರದಲ್ಲಿ ಕಲುಷಿತ ನೀರು ಸೇವಿಸಿ ಈವರೆಗೆ ಐವರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ 20 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.