alex Certify BIG NEWS: ಕಲುಷಿತ ನೀರು ಸೇವನೆಗೆ ಮತ್ತೋರ್ವ ಬಲಿ; ಏರುತ್ತಲೇ ಇದೆ ಸಾವಿನ ಸಂಖ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲುಷಿತ ನೀರು ಸೇವನೆಗೆ ಮತ್ತೋರ್ವ ಬಲಿ; ಏರುತ್ತಲೇ ಇದೆ ಸಾವಿನ ಸಂಖ್ಯೆ

ರಾಯಚೂರು: ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ರಾಯಚೂರು ಜಿಲ್ಲೆಯ ಯರಗೆರಾ ಕಾಲೋನಿ ನಿವಾಸಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಈ ಮೂಲಕ ಕಲುಷಿತ ನೀರಿಗೆ ಬಲಿಯಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಕಲುಷಿತ ಕುಡಿಯುವ ನೀರು ಸೇವಿಸಿ ಅನಾರೋಗ್ಯಕ್ಕೀಡಾಗಿದ್ದ 48 ವರ್ಷದ ಜನಕರಾಜ್ ಇಂದು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ವಾಂತಿ, ಭೇದಿಯಿಂದ ಬಳಲುತ್ತಿದ್ದ ಜನಕರಾಜ್ ಅವರನ್ನು ಒಂದು ವಾರದ ಹಿಂದೆ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಇಂದು ಕೊನೆಯುಸಿರೆಳೆದಿದ್ದಾರೆ.

ರಾಯಚೂರಿನ ಇಂದಿರಾನಗರದಲ್ಲಿ ಕಲುಷಿತ ನೀರು ಸೇವಿಸಿ ಈವರೆಗೆ ಐವರು ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ 20 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...