ಬೆಂಗಳೂರು: ಕಲುಷಿತ ನೀರು ಸೇವಿಸಿ ಮೂವರು ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ವಿಶೇಷ ಅಧಿಕಾರಿಗಳ ತಂಡ ರಚನೆ ಮಾಡಿದೆ.
ಕಲುಷಿತ ನೀರು ಸೇವಿಸಿ ದುರಂತ ಪ್ರಕರಣದ ತನಿಖೆಗೆ ಮೂವರು ಅಧಿಕಾರಿಗಳ ತಂಡ ರಚನೆ ಮಾಡಿ ತನಿಖೆಗೆ ಆದೇಶ ನೀಡಿದೆ.
ಕೊಪ್ಪಳದ ಬಸರಿಹಾಳ, ಕುಷ್ಟಗಿಯ ಬಿಜಕಲ್ ಗ್ರಾಮ ವಾಂತಿಬೇಧಿ ಪ್ರಕರಣ ಹಾಗೂ ರಾಯಚೂರು ಜಿಲ್ಲೆ ದೇವದುರ್ಗದ ರೇಕಲಮಡಿಯಲ್ಲಿ ಮಗು ಸಾವು ಪ್ರಕರಣ ಹಿನ್ನೆಲೆಯಲ್ಲಿ ತನಿಖೆಗೆ ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ ಐಎಎಸ್ ಅಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಅಧೀಕ್ಷಕ ಅಭಿಯಂತರ ಚಂದ್ರಹಾಸ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ರಾಜತಾಂತ್ರಿಕ ಸಮಾಲೋಚಕ ಬಿ.ಆರ್.ವೆಂಕಟೇಶ್ ನೇತೃತ್ವದ ತಂಡವನ್ನು ರಚನೆ ಮಾಡಿದೆ.
ಮೂರು ಅಧಿಕಾರಿಗಳ ತಂಡ ಪ್ರಕರಣದ ತನಿಖೆ ನಡೆಸಿ ಜೂನ್ 20ರೊಳಗೆ ವರದಿ ನೀಡುವಂತೆ ಸರ್ಕಾರ ಸೂಚಿಸಿದೆ.