alex Certify BIG NEWS: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥ

ತುಮಕೂರು: ಕಲುಷಿತ ನೀರು ಸೇವಿಸಿ 15 ಜನರು ಅಸ್ವಸ್ಥರಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಬಸ್ಸರಹಳ್ಳಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಸ್ವಸ್ಥಗೊಂಡಿರುವ 15 ಜನರನ್ನು ಪಾವಗಡ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವನ ಸ್ಥಿತಿ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಗ್ರಾಮದ ಸಾರ್ವಜನಿಕ ನಲ್ಲಿಗೆ ಪೂರೈಕೆಯಾಗುವ ನೀರು ಸರಬರಾಜು ಸಂಪರ್ಕದ ಗೇಟ್ ವಾಲ್ ನಲ್ಲಿ ನೀರು ಸೋರಿಕೆಯಾಗಿ ನೀರು ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ. ಗ್ರಾಮಸ್ಥರು ಸ್ಥಳೀಯ ಅಧಿಕಾರಿಗಳ ಬೇಜವಾಬ್ದಾರಿಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈ.ಎನ್.ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...