ಕಲಬುರ್ಗಿ: ಕಲ್ಯಾಣ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿಸಬೇಕು ಎಂದು ಆಗ್ರಹಿಸಿ ಪ್ರತ್ಯೇಕ ರಾಜ್ಯದ ಧ್ವಜಾರೋಹಣಕ್ಕೆ ಮುಂದಾದ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಸದಸ್ಯರನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರ್ಗಿಯ ಸರ್ದಾರ್ ವಲಭಭಾಯ್ ಪಟೇಲ್ ವೃತ್ತದಲ್ಲಿ ಧ್ವಜಾರೋಹಣ ನಡೆಸುವುದಾಗಿ ಸಮಿತಿ ಸದಸ್ಯರು ಘೋಷಿಸಿದ್ದರು. ರಾಜ್ಯ ಸರ್ಕಾರ ತಮಗೆ ತಾರತಮ್ಯ ಮಾಡುತ್ತಿದೆ. ಕಲ್ಯಾಣ ಕರ್ನಾಟಕ ಭಾಗವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎಂದು ಆಗ್ರಹಿಸಿ ಪ್ರತ್ಯೇಕ ಧ್ವಜ ಹಿಡಿದು ದಿ.ಮಾಜಿ ಸಚಿವ ಉಮೇಶ್ ಕತ್ತಿ, ವೈಜನಾಥ್ ಅವರ ಚಿತ್ರಪಟಗಳನ್ನು ಹಿಡಿದು ಹೋರಾಟಗಾರರು ಧ್ವಜಸ್ತಂಬದತ್ತ ಆಗಮಿಸಿದ್ದರು.
ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಮುಂದಾಗುತ್ತಿದ್ದಂತೆ ಪೊಲೀಸರು ಹೋರಾಟ ಸಮಿತಿ ಸದಸ್ಯರನ್ನು ಬಂಧಿಸಿ ಕರೆದೊಯ್ದಿದ್ದಾರೆ.