ಕೊಪ್ಪಳ: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ನೂತನ ಪಕ್ಷದ ಮೂಲಕ ಮತ್ತೆ ರಾಜಕೀಯಕ್ಕೆ ಎಂಟ್ರಿ ಕೊಟ್ಟಿರುವ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಇಂದು ತಮ್ಮ ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ್ದಾರೆ.
ಗಂಗಾವತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜನಾರ್ಧನ ರೆಡ್ಡಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಚಿಹ್ನೆ ಫುಟ್ ಬಾಲ್ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ನನ್ನ ನಿರೀಕ್ಷೆಗೂ ಮೀರಿ ಜನರ ಬೆಂಬಲ ಸಿಗುತ್ತಿದೆ. 90 ದಿನಗಳಲ್ಲಿ 12 ಅಭ್ಯರ್ಥಿಗಳ ಘೋಷಣೆ ಮಾಡಿದ್ದು, ಇನ್ನೂ 19 ಅಭ್ಯರ್ಥಿಗಳನ್ನು ಇನ್ನೊಂದು ವಾರದಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದರು.
ಇದೇ ವೇಳೆ ಜನಾರ್ಧನ ರೆಡ್ಡಿ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿದರು.
* ಪ್ರತಿ ಮನೆಗೆ 250 ಯೂನಿಟ್ ಉಚಿತ ವಿದ್ಯುತ್
* 5 ಎಕರೆಗೂ ಕಡಿಮೆ ಭೂಮಿ ಇರುವ ರೈತರಿಗೆ 15 ಸಾವಿರ ನೆರವು
* ರೈತರಿಗೆ ಬಡ್ದಿ ರಹಿತ ಸಾಲ
* ಹೆಣ್ಣು ಮಕ್ಕಳ ಹೆಸರಲ್ಲಿ ಮನೆ ಇಲ್ಲದವರಿಗೆ 2 BHK ಮನೆ
* ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಸಮಾನ ವೇತನ
* ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ
* ಆಶಾ-ಅಂಗನವಾಡಿ ಕಾರ್ಯಕರ್ತೆಯರಿಗೆ 1000 ರೂ. ವೇತನ ಹೆಚ್ಚಳ
* ಮಹಿಳೆಯರ ಭದ್ರತೆಗಾಗಿ ಮಹಿಳಾ ತಂಡ ರಚನೆ
* ಆರ್ಥಿಕ ಸಮಸ್ಯೆಯಿರುವ ಮಕ್ಕಳಿಗೆ ಉಚಿತ ಶಿಕ್ಷಣ ಸೇರಿದಂತೆ ಹಲವು ಭರವಸೆಗಳನ್ನು ಪ್ರಣಾಳಿಕೆಯಲ್ಲಿ ನೀಡಿದ್ದಾರೆ.