ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯ ಪ್ರವಾಸಕ್ಕೆ ಭೇಟಿ ನೀಡಿದ್ದ ವೇಳೆ ಬೆಂಗಳೂರಿನಲ್ಲಿ 23 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗಿದ್ದ ರಸ್ತೆ ಕಳಪೆ ಕಾಮಗಾರಿ ಹಿನ್ನೆಲೆಯಲ್ಲಿ ಬಿಬಿಎಂಪಿಯ ಇಬ್ಬರು ಎಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ.
ರಸ್ತೆ ಪರಿಶೀಲನೆ ವೇಳೆ ಕಳಪೆ ಕಾಮಗಾರಿ ಸಾಬೀತಾಗಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. 40 ಎಂ.ಎಂ ಡಾಂಬರೀಕರಣ ಮಾಡಬೇಕಿದ್ದ ಜಾಗದಲ್ಲಿ 30ಎಂ ಎಂ ಡಾಂಬ್ರೀಕರಣ ಮಾಡಿದ್ದು, ತನಿಖೆ ವೇಳೆ ಕಳಪೆ ಕಾಮಗಾರಿ ಪತ್ತೆಯಾಗಿದೆ.
ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎ.ರವಿ ಹಾಗೂ ಸಹಾಯಕ ಎಂಜಿನಿಯರ್ ವಿಶ್ವಾಸ್ ಐ.ಕೆ ಎಂಬುವವರನ್ನು ಅಮಾನತು ಮಾಡಿ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರು ಆದೇಶ ಹೊರಡಿಸಿದ್ದಾರೆ.