ಕಳೆದೊಂದು ವಾರದಿಂದ ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿಂದು ಮಹತ್ವದ ಸಭೆ ನಡೆಯಲಿದೆ.
ಅಲ್ಲದೆ H3N2 ಸೋಂಕು ಕೂಡಾ ಹೆಚ್ಚಳವಾಗುತ್ತಿದ್ದು, ಇದರ ಪರಿಣಾಮ ಸಾರ್ವಜನಿಕರು ಕೆಮ್ಮು, ಶೀತ ಹಾಗೂ ಜ್ವರದಿಂದ ಬಳಲುತ್ತಿದ್ದಾರೆ. ಈಗಾಗಲೇ ಭಾರತೀಯ ವೈದ್ಯಕೀಯ ಸಂಘ ಈ ನಿಟ್ಟಿನಲ್ಲಿ ಸೂಚನೆಯೊಂದನ್ನು ಹೊರಡಿಸಿದೆ.
ವೈದ್ಯರುಗಳು ಆಂಟಿಬಯೋಟಿಕ್ ಗಳನ್ನು ಶಿಫಾರಸ್ಸು ಮಾಡುವುದನ್ನು ಆದಷ್ಟು ತಪ್ಪಿಸಲು ಭಾರತೀಯ ವೈದ್ಯಕೀಯ ಸಂಘ ತಿಳಿಸಿದ್ದು, ಜೊತೆಗೆ ಸಾರ್ವಜನಿಕರು ಸಹ ಸ್ವಯಂ ಆಗಿ ಆಂಟಿ ಬಯೋಟಿಕ್ ಗಳನ್ನು ಸೇವಿಸಬಾರದು ಎಂದು ತಿಳಿಸಿದೆ.
ಈ ಎಲ್ಲದರ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ನೇತೃತ್ವದಲ್ಲಿ ಇಂದು ನಡೆಯಲಿರುವ ಸಭೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಚರ್ಚೆ ನಡೆಸಲಾಗುತ್ತದೆ. ನಂತರ ಸಾರ್ವಜನಿಕರಿಗೆ ಈ ಕುರಿತಂತೆ ಮಾಹಿತಿ ನೀಡಲಾಗುತ್ತದೆ.